Select Your Language

Notifications

webdunia
webdunia
webdunia
webdunia

ಮೇಟಿ ರಾಸಲೀಲೆ ಪ್ರಕರಣ ರಾಜ್ಯಕ್ಕೆ ಅಪಮಾನ: ಕೆ.ಎಸ್.ಈಶ್ವರಪ್ಪ

ಮೇಟಿ ರಾಸಲೀಲೆ ಪ್ರಕರಣ ರಾಜ್ಯಕ್ಕೆ ಅಪಮಾನ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ , ಗುರುವಾರ, 15 ಡಿಸೆಂಬರ್ 2016 (15:50 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣ ರಾಜ್ಯಕ್ಕೆ ಅಪಮಾನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವೈ.ಮೇಟಿ ಅವರದ್ದು ಪಶು ಸಂಸ್ಕೃತಿ. ರಾಜ್ಯದಲ್ಲಿ ಇಂತಹ ಸಾಕಷ್ಟು ಅನಾಚಾರಗಳು ನಡೆದಿವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 
 
ಇನ್ನು ಇಬ್ಬರ ಸಚಿವರ ಕರ್ಮಕಾಂಡವನ್ನು ಬಹಿರಂಗಪಡಿಸುತ್ತೇನೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಿ ಅಂತಹ ಸಚಿವರ ವಿರುದ್ಧ ಕ್ರಮ ಜರುಗಿಸುವಂತೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ದಾರಿ ತಪ್ಪಿಸುವ ಜಾಹೀರಾತು: ಪತಂಜಲಿಗೆ 11 ಲಕ್ಷ ದಂಡ