Select Your Language

Notifications

webdunia
webdunia
webdunia
webdunia

ಮೆಟ್ರೋ ದರ ಏರಿಕೆ: ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ

Metro Fare Hike, Karnataka Congress Government, Opposition Leader R Ashok

Sampriya

ಬೆಂಗಳೂರು , ಭಾನುವಾರ, 9 ಫೆಬ್ರವರಿ 2025 (18:28 IST)
ಬೆಂಗಳೂರು: ಪೆಟ್ರೋಲ್, ಡೀಸೆಲ್, ಹಾಲು, ಬಸ್ಸು ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನ ಏಕಾಏಕಿ 50% ಏರಿಸುವ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌ ಅಶೋಕ್‌ ಆಕ್ರೋಶ ಹೊರಹಾಕಿದ್ದಾರೆ..

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಮೆಟ್ರೋ ದರ 50% ಏರಿಕೆ ಮಾಡಿರುವುದರಿಂದ   ಅನೇಕ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು. ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.


ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ, ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೊಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾಕುಂಭಮೇಳ: ಇಂದು ಒಂದೇ ದಿನದಲ್ಲಿ 8 ಮಿಲಿಯನ್ ಭಕ್ತರಿಂದ ಪವಿತ್ರ ಸ್ನಾನ