ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಮಾಡಿದ ಬೆನ್ನಲ್ಲೇ ನಮ್ಮ ಮೆಟ್ರೊ ಪ್ರಯಾಣ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಅಣಿಯಾಗಿರುವಾಗಲೇ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಬಿಜೆಪಿ ಟೀಕೆ ಮಾಡಿದೆ.
ಈ ಕುರಿತು ಇಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಸಿದ್ದರಾಮಯ್ಯ ಅವರನ್ನು ಹೈಕ್ ರಾಮಯ್ಯ ಎಂದು ಟೀಕಿಸಿದೆ.
ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್‌ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್ ಹೈಕ್ ಎನ್ನುತ್ತಾ ಶೇ 48 ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್ ರಾಮಯ್ಯ ಎನಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದೆ.
ಬಸ್ ಪ್ರಯಾಣವೂ ದುಬಾರಿ ಮೆಟ್ರೋ ಬಲು ದುಬಾರಿ ಆಗಿದೆ. ಜನರಿಗೆ ಅಕ್ಕಿಯನ್ನೂ ಕೊಡುತ್ತಿಲ್ಲ, ಗೃಹ ಲಕ್ಷ್ಮಿ ಹಣವನ್ನು ನೀಡುತ್ತಿಲ್ಲ. ದುಡಿದು ತಿನ್ನೋಣ ಎಂದರೆ ಎಲ್ಲಾ ದರವನ್ನು ಏರಿಕೆ ಮಾಡಿ ಬಡವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದೆ ಎಂದು ಆರೋಪಿಸಿದೆ.
ನಮ್ಮ ಮೆಟ್ರೊ ಸಂಚಾರ ದರವನ್ನು ಶೇ 30ರಿಂದ 45ರವರೆಗೆ ಹೆಚ್ಚಿಸುವ ಬಗ್ಗೆ ಶುಕ್ರವಾರ ನಡೆದ ಬಿಎಂಆರ್‌ಸಿಎಲ್ ಮಂಡಳಿಯ ಆಂತರಿಕ ಸಭೆಯಲ್ಲಿ ಚರ್ಚೆ ನಡೆದಿದೆ.
ಪರಿಷ್ಕೃತ ದರದ ಬಗ್ಗೆ ಮಂಡಳಿಯ ಸದಸ್ಯರು ಅಥವಾ ಬಿಎಂಆರ್‌ಸಿಎಲ್ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ.
ದರ ಪರಿಷ್ಕರಣಾ ಸಮಿತಿಯ ಒಂದು ತಿಂಗಳ ಹಿಂದೆ ಶಿಫಾರಸು ಮಾಡಿತ್ತು. ಶಿಫಾರಸು ಯಥಾವತ್ ಜಾರಿ ಮಾಡಬೇಕಿಲ್ಲ. ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಿ ಪರಿಷ್ಕೃತ ದರ ಪ್ರಕಟಿಸಲಿದೆ. ಶಿಫಾರಸ್ಸನ್ನು ಪ್ರಮಾಣವನ್ನು ವ್ಯತ್ಯಾಸ ಮಾಡುವ ಅಧಿಕಾರ ಮಂಡಳಿಗೆ ಇದೆ ಎಂದು ಬಿಎಂಆರ್‌ಸಿಎಲ್ ಹೇಳಿದ್ದರು.
ರಾಜ್ಯದಲ್ಲಿ ಸಾರಿಗೆ ನಿಗಮಗಳಿಗೆ ಐಸಾ ಐಸಾ ಯೋಜನೆ ಕೊಟ್ಟು ಬಸ್‌ಗಳನ್ನು ತಳ್ಳುವಂತೆ ಮಾಡಿರುವ ಭ್ರಷ್ಟ ಸಿದ್ದರಾಮಯ್ಯ ಅವರು ಇದೀಗ ಎಲ್ಲಾ ಹೈಕ್ ಹೈಕ್ ಎನ್ನುತ್ತಾ 48% ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡುವ ಮೂಲಕ ಹೈಕ್ ರಾಮಯ್ಯ ಎನಿಸಿಕೊಂಡಿದ್ದಾರೆ.