Webdunia - Bharat's app for daily news and videos

Install App

ಮೆಟ್ರೊ ದರ ಹೆಚ್ಚಳ: ಬೆಂಗಳೂರು ಜನತೆ ಮುಂದೆ ವಾಸ್ತವಾಂಶ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 11 ಫೆಬ್ರವರಿ 2025 (17:04 IST)
ಬೆಂಗಳೂರು: ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.


ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಬಿಜೆಪಿ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments