ಚಂಡಮಾರುತ ಮಿಚಾಂಗ್ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಅಬ್ಬರಿಸಿದೆ. ಧಾರಾಕಾರ ಮಳೆ, ಗಾಳಿಯಿಂದ ಸಂಭವಿಸಿದ ಅವಘಡಗಳಲ್ಲಿ ಮಹಿಳೆ ಸೇರಿ ಐವರು ಮೃತಪಟ್ಟಿದ್ದಾರೆ.. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ. ರಾಜಧಾನಿ ಚೆನ್ನೈ ಮತ್ತು ನೆರೆಯ ಮೂರು ಜಿಲ್ಲೆಗಳಲ್ಲಿ ಮಿಚಾಂಗ್ ತೀವ್ರ ಪರಿಣಾಮ ಬೀರಿದೆ.
ಕಳೆದೆರಡು ದಿನಗಳಲ್ಲಿ 40 ಸೆಂ.ಮೀ ಮಳೆ ಆಗಿದೆ. ಚೆನ್ನೈ ವಿಮಾನ ನಿಲ್ದಾಣ, ಪಾಲಿಕೆ ಆವರಣ, ನಗರದ ಬಹುತೇಕ ರಸ್ತೆಗಳು ಜಲಾವೃತಗೊಂಡಿವೆ.. ಜನಜೀವನ ಅಸ್ತವ್ಯಸ್ತಗೊಂಡಿದೆ. ಚೆನ್ನೈ, ಹೊರವಲಯದಲ್ಲಿ ಮಹಿಳೆ ಸೇರಿ ಐವರು ಸಾವಿಗೀಡಾಗಿದ್ದಾರೆ. ಈ ಪೈಕಿ ಇಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದ್ದಾರೆ.. ಕಳೆದ 24 ಗಂಟೆಗಳಲ್ಲಿ ಚೆನ್ನೈನ ಪೆರುಂಗುಡಿಯಲ್ಲಿ ಗರಿಷ್ಠ ಅಂದರೆ 29 ಸೆಂ.ಮೀ ಮಳೆ ಪ್ರಮಾಣ ದಾಖಲಾಗಿದ್ದರೆ, ತಿರುವಲ್ಲೂರು ಜಿಲ್ಲೆಯ ಅವಡಿಯಲ್ಲಿ 28 ಸೆಂ.ಮೀ.. ಚೆಂಗಲ್‌ಪೇಟ್‌ನ ಮಾಮಲ್ಲಪುರಂನಲ್ಲಿ 22 ಸೆಂ.ಮೀ ಮಳೆ ಸುರಿದಿರುವುದು ದಾಖಲಾಗಿದೆ.