Webdunia - Bharat's app for daily news and videos

Install App

ಮೈಕ್ರೋ ಫೈನಾನ್ಸ್‌ ದಂಧೆಗಿದೆ ಸರ್ಕಾರದ ಕುಮ್ಮಕ್ಕು: ಛಲವಾದಿ ನಾರಾಯಣಸ್ವಾಮಿ

Sampriya
ಶನಿವಾರ, 25 ಜನವರಿ 2025 (19:43 IST)
Photo Courtesy X
ಬೆಂಗಳೂರು: ಮೈಕ್ರೋ ಫೈನಾನ್ಸ್  ದಂಧೆಗೆ ಸರ್ಕಾರದ ಕುಮ್ಮಕ್ಕು ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ. ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಹೇಳಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳಕ್ಕೆ ಅನೇಕರ ಸಾವು ಸಂಭವಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್ ಸರ್ಕಾರ ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. ಹೊಸ ಕಾನೂನು ಜಾರಿಗೆ ತಂದು, ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುವುದಾಗಿ ತಿಳಿಸಿದೆ ಎಂದಿದ್ದಾರೆ.

ಮೈಕ್ರೋ ಫೈನಾನ್ಸ್‌ಗಳ ಸಮಸ್ಯೆ ಕುರಿತು ಅನೇಕ ಮುಖಂಡರು ಗಮನ ಸೆಳೆದರೂ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಕೊನೆಗೂ ಇವತ್ತು ಒಂದು ತೀರ್ಮಾನಕ್ಕೆ ಬಂದಿದೆ. ಫೈನಾನ್ಸ್ ವಸೂಲಿಗೆ ತೊಂದರೆ ಕೊಟ್ಟರೆ, ಗೂಂಡಾಗಳನ್ನು ಕಳುಹಿಸಿದರೆ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ. ಜನರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹ. ಕಾಂಗ್ರೆಸ್ ಸರ್ಕಾರದ ಹಿತದೃಷ್ಟಿಯಿಂದ ಅಲ್ಲ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments