Publish Date: Sun, 20 Oct 2019 (13:38 IST)
Updated Date: Sun, 20 Oct 2019 (13:41 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಲಘು ಹೃದಯಾಘಾತ ಸಂಭವಿಸಿದೆ ಎಂಬುದಾಗಿ ತಿಳಿದುಬಂದಿದೆ.
ಶನಿವಾರ ಬೆಳಿಗ್ಗೆ 10 ಗಂಟೆಗೆ ಶಾಸಕರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದು ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.
ಸದ್ಯ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರು ಸ್ಟೆಂಟ್ ಅಳವಡಿಸಿದ್ದಾರೆ ಎನ್ನಲಾಗಿದೆ.