ಬೆಂಗಳೂರು : ಇದೇ ತಿಂಗಳ 3ರಂದು ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಮುಂಬೈನಲ್ಲಿ ಇಂದು ಕಲ್ಲಿದ್ದಲು ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಂಬೈನಲ್ಲಿ ನಡೆದ ಕಲ್ಲಿದ್ದಲು ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು,
ಇದೇ ಶನಿವಾರ ಬೆಂಗಳೂರಿನಲ್ಲಿ ಗಣಿಗಾರಿಕೆ ಕುರಿತಂತೆ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗಿದೆ. ಆಸಕ್ತರು ಸಮಾವೇಶದಲ್ಲಿ ಭಾಗವಹಿಸುವಂತೆ ಕೇಂದ್ರ ಸಚಿವ ಹೂಡಿಕೆದಾರರಿಗೆ ಆಹ್ವಾನಿಸಿದ್ದಾರೆ.