ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ಜೋರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣವನ್ನು ಕೆಣಕಿದ್ದಾರೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಎಚ್ ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ಬಿರುಸುಗೊಂಡಿದೆ. ಗಣಿ ಹಗರಣದಲ್ಲಿ ಎಚ್‌ಡಿಕೆ ವಿರುದ್ಧ ಸಂದರ್ಭ ಬಂದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ನನನ್ನು ಬಂಧಿಸಲು ನೂರು ಸಿದ್ದರಾಮಯ್ಯನವರು ಬರ್ಬೇಕು ಎಂದು ತಿರುಗೇಟು ನೀಡಿದ್ದರು.
ಇದೀಗ ಎಚ್‌ಡಿಕೆ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯವರೇ ಕರ್ನಾಟಕ ಪೊಲೀಸರ ಸಾಮರ್ಥ್ಯ ಪ್ರಶ್ನಿಸಿದರೆ ಹುಷಾರ್ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ರಾಜೀನಾಮೆಗೆ ಪಟ್ಟು ಹಿಡಿದಿದ್ದ ವಿಪಕ್ಷಗಳಿಗೆ ಇದೀಗ ಸನ್ಮಾನ್ಯ ಭ್ರಷ್ಟ ಕುಮಾರ ಅವರೇ,
ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬಂದರೂ ಸಾಧ್ಯವಿಲ್ಲ ಎಂದಿದ್ದೀರಿ.
ನಿಮ್ಮನ್ನು ಬಂಧಿಸಲು ನೂರು ಸಿದ್ದರಾಮಯ್ಯನವರು ಬೇಕಿಲ್ಲ, ಒಬ್ಬ ಸಿದ್ದರಾಮಯ್ಯನವರೂ ಬೇಕಿಲ್ಲ.
ಎಚ್ ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಪೊಲೀಸರ ಸಾಮರ್ಥ್ಯಕ್ಕೆ ಸವಾಲು ಹಾಕುತ್ತಿದ್ದಾರಾ ಅಥವಾ ಕಾನೂನನ್ನು ಪ್ರಶ್ನೆ ಮಾಡುತ್ತಿದ್ದಾರಾ?<>