Select Your Language

Notifications

webdunia
webdunia
webdunia
webdunia

ಅನಾಮಿಕ ವ್ಯಕ್ತಿಯಿಂದ ಸಚಿವ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ

ಅನಾಮಿಕ ವ್ಯಕ್ತಿಯಿಂದ ಸಚಿವ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ
ಬೆಂಗಳೂರು , ಸೋಮವಾರ, 18 ಫೆಬ್ರವರಿ 2019 (11:11 IST)
ಬೆಂಗಳೂರು : ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ನಿನ್ನೆ ತಡರಾತ್ರಿ ಜೀವ ಬೆದರಿಕೆ ಕರೆ ಬಂದಿದೆ ಎಂಬ ಮಾಹಿತಿ ತಿಳಿದುಬಂದಿದೆ.


ಸಚಿವ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿರದ ವೇಳೆ ನಿನ್ನೆ ತಡರಾತ್ರಿ 1.45 ರ ಸುಮಾರಿಗೆ ಅವರ ಮನೆಯ ಲ್ಯಾಂಡ್ ಲೈನ್ ಗೆ ದೂರವಾಣಿ ಕರೆ ಬಂದಿದ್ದು, ಅನಂತ್ ಕುಮಾರ್ ಹೆಗಡೆ ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿ ಮಾತನಾಡಿದ್ದಾರೆ.


ಈ ವೇಳೆ ಕರೆ ಮಾಡಿದ ಅನಾಮಿಕ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಬಯ್ಯಲು ಶುರು ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ರೂಪಾ ಅವರು ಕಾಲ್ ಕಟ್ ಮಾಡಿದರೂ ಕೂಡ ಪದೇ ಪದೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಆಪ್ತ ಸಹಾಯಕ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುಲ್ವಾಮಾನಲ್ಲಿ ಮತ್ತೆ ಉಗ್ರರೊಂದಿಗೆ ಗುಂಡಿನ ಚಕಮಕಿ; ನಾಲ್ವರು ಯೋಧರು ಹುತಾತ್ಮ