Select Your Language

Notifications

webdunia
webdunia
webdunia
Thursday, 24 April 2025
webdunia

ಮೈತ್ರಿ ಸರ್ಕಾರವನ್ನು ಲೇವಡಿ ಮಾಡಿದ ಸಚಿವ ಅನಂತ್ ಕುಮಾರ್ ಹೆಗಡೆ

ಬೆಂಗಳೂರು
ಬೆಂಗಳೂರು , ಭಾನುವಾರ, 18 ನವೆಂಬರ್ 2018 (15:37 IST)
ಬೆಂಗಳೂರು : ಮಂಡ್ಯದಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮೈತ್ರಿ ಸರ್ಕಾರವನ್ನು co-jaa ಸರ್ಕಾರ ಎಂದು ಲೇವಡಿ ಮಾಡಿದ್ದಾರೆ.


ಮಂಡ್ಯದಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಲು ಸಮ್ಮಿಶ್ರ ಸರ್ಕಾರ ತೀರ್ಮಾನ ಮಾಡಿದೆ. ಆದರೆ ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ,’ ದುಡ್ಡು ಹೊಡೆಯಲು ಯೋಜನೆಗಳನ್ನು ರೂಪಿಸುವಲ್ಲಿ ಐಎನ್ ಸಿ ಇಂಡಿಯಾಗೆ ದೊಡ್ಡ ಪರಂಪರೆ ಇದೆ. ಅದರಲ್ಲಿಯೂ ಈಗ ಇರುವ coja ಸರ್ಕಾರ ಪ್ರತಿಮೆ ಪ್ರವಾಸೋದ್ಯಮ ಹೆಸರಿನಲ್ಲಿ ದುಡ್ಡು ಹೊಡೆಯಲು ಭರ್ಜರಿ ತಯಾರಿ ನಡೆಸುತ್ತಿದೆ, ತಾಯಿ ಕಾವೇರಮ್ಮ, ನಿನ್ನ ಹೆಸರಿನಲ್ಲಿ ಲೂಟಿ ಮಾಡುವವರನ್ನು ನೀನೇ ಶಿಕ್ಷಿಸಬೇಕು’ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದಿಂದ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್1 ಎನ್1 ರೋಗಕ್ಕೆ ಉಚಿತ ಚಿಕಿತ್ಸೆ