ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ನೀಡಿರುವ ಹೇಳಿಕೆಯಿಂದ ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವರು ಇಂತಹ ಕೀಳು ಮಟ್ಟದ ಹೇಳಿಕೆ ನೀಡುವುದು ಅಸಮಂಜಸ, ಎಚ್. ಆಂಜನೇಯ ಯಾವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ ತಿಳಿಯದು. ರಾಜ್ಯ ಸರಕಾರ ಸಚಿವರುಗಳಿಗೆ ಇಂತಹ ಹೇಳಿಕೆಯನ್ನು ನೀಡದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆ ಸರಕಾರ ಶಾಲೆಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಖಾಸಗಿ ಶಾಲೆಗಳು ಶಿಕ್ಷಣವನ್ನು ವ್ಯಾಪಾರಿಕರಣ ಮಾಡಿಕೊಂಡಿವೆ ಎಂದು ಟೀಕಿಸಿದ್ದರು. ಸರಕಾರದ ನೀತಿ ನಿಯಮಗಳನ್ನು ಗಾಳಿಗೆ ತೂರಿ, ಹಣಕ್ಕಾಗಿ ಶಿಕ್ಷಣವನ್ನು ಮಾರಾಟ ಮಾಡುತ್ತಿರುವ ಖಾಸಗಿ ಶಾಲೆಗಳು ವೇಶ್ಯಾವಾಟಿಕೆ ಅಡ್ಡಿಗಿಂತಲೂ ಕಡೆಯಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಹೇಳಿಕೆ ನೀಡಿದ್ದರು.
ಸಮಾಜ ಕಲ್ಯಾಣ ಇಲಾಖೆ ಸಚಿವರ ಹೇಳಿಕೆಯನ್ನು ಖಂಡಿಸಿ ಖಾಸಗಿ ಶಾಲೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದರ ಹಿನ್ನಲೆಯಲ್ಲಿ ಎಚ್. ಆಂಜನೇಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.