Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮತ್ತೆ `ಲಾಕ್ ಡೌನ್’ ಜಾರಿ ಕುರಿತಂತೆ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದೇನು..?

ರಾಜ್ಯ
bangalore , ಮಂಗಳವಾರ, 11 ಜನವರಿ 2022 (20:31 IST)
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಲಿದೆ ಎಂದರು.
ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಅಗತ್ಯವಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒಂಥಾರ ಸೀಸನ್ ರಾಜಕಾರಣಿ, ಏನಾದ್ರೂ ಹೇಳಿದ್ರೆ ಅದಕ್ಕೊಂದು ಏನಾದ್ರೂ ಹೇಳುತ್ತಾರೆ.ಅನುಭವವನ್ನು ರಾಜಕೀಯಕ್ಕೆ ಬಳಸಬೇಕು. ಅದರ ಬದಲು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಬಳಸುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಒಂದೇ ದಿನ 1,68,063 ಕೇಸ್ ಪತ್ತೆ! 277 ಮಂದಿ ಸಾವು