ಹಾವೇರಿ : ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಸಚಿವ ಬಿ.ಸಿ.ಪಾಟೀಲ್ ತರಾಟೆ ತೆಗೆದುಕೊಂಡಿದ್ದಾರೆ. ಕೊರೊನಾ ವೈರಸ್ ತಡೆಯಲು ಲಾಕ್ ಡೌನ್ ಗೆ ಆದೇಶಿಸಿದರೂ ಹಿರೇಕೆರೂರಿನಲ್ಲಿ ಜನರು ಲಾಕ್ ಡೌನ್ ಆದೇಶ ಉಲ್ಲಂಘಿಸಿ ಗುಂಪಾಗಿ ಸೇರಿಕೊಂಡು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿಕೊಂಡಿದ್ದಾರೆ. ಇದನ್ನು ಗಮನಿಸಿದ ಸಚಿವ ಬಿ.ಸಿ.ಪಾಟೀಲ್ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.