ಸಿಎಂ ಸಿದ್ದರಾಮಯ್ಯ ಪತ್ನಿ, ನಾನು ಯಾವುದೇ ತಪ್ಪು ಮಾಡಿಲ್ಲ: ಸಚಿವ ಭೈರತಿ ಸುರೇಶ್

Krishnaveni K
ಮಂಗಳವಾರ, 28 ಜನವರಿ 2025 (14:08 IST)
ಬೆಂಗಳೂರು: ಮುಡಾ ಹಗರಣದಲ್ಲಿ ನಾನು ಮತ್ತು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಯಾವುದೇ ತಪ್ಪು ಮಾಡಿಲ್ಲ, ಇದರಲ್ಲಿ ನಮ್ಮ ಪಾತ್ರವಿಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಇಡಿ ನೋಟಿಸ್ ನೀಡಿತ್ತು. ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣದಲ್ಲಿ ಸಚಿವ ಭೈರತಿ ಸುರೇಶ್ ಹೆಸರೂ ಇದೆ. ಹೀಗಾಗಿ ಇಬ್ಬರಿಗೂ ಈಗ ರಿಲೀಫ್ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ ಸಚಿವ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗದ ಮೇಲೆ ನಂಬಿಕೆಯಿಟ್ಟುಕೊಂಡಿದ್ದೇವೆ. ನಮಗೆ ಯಾಕೆ ನೋಟಿಸ್ ಕೊಟ್ಟಿದ್ದರೆಂದು ಇಡಿ ಮತ್ತು ಸಿಬಿಐನವರನ್ನೇ ಕೇಳಬೇಕು. ನಮಗೆ ನ್ಯಾಯಾಲಯದ ಮೇಲೆ ವಿಶ್ವಾಸವಿದೆ ಎಂದು ಸಚಿವರು ಹೇಳಿದ್ದಾರೆ.

ನಮಗೆ ನೋಟಿಸ್ ನೀಡಿದ್ದಾರೆಂದು ತಿಳಿದು ಅಚ್ಚರಿಯಾಗಿತ್ತು. ಹಗರಣ ನಡೆದಾಗ ನಾನು ಮಂತ್ರಿಯಾಗಿಲ್ಲ. ಯಾರಿಗೂ ಸೈಟು ಕೊಟ್ಟಿಲ್ಲ, ಪಡೆದಿಲ್ಲ. ಹೀಗಿರುವಾಗ ನನಗೆ ನೋಟಿಸ್ ಕೊಟ್ಟಿದ್ದು ಯಾಕೆ ಎಂದೇ ಅಚ್ಚರಿಯಾಗಿತ್ತು. ಬಹುಶಃ ಇದು ನ್ಯಾಯಾಧೀಶರಿಗೂ ಮನವರಿಕೆಯಾಗಿರಬೇಕು. ಅದಕ್ಕೇ ತಡೆಯಾಜ್ಞೆ ನೀಡಿದ್ದಾರೆ ಎಂದು ಭೈರತಿ ಸುರೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments