Publish Date: Sat, 11 Jul 2020 (19:26 IST)
Updated Date: Sat, 11 Jul 2020 (19:28 IST)
ರಾಜ್ಯದ ಪ್ರವಾಸೋದ್ಯಮ ಸಚಿವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಪ್ರವಾಸೋದ್ಯಮ ಸಚಿವ ಸಿ. ಟಿ. ರವಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಚಿಕ್ಕಮಗಳೂರು ನಗರದ ರಾಮನಹಳ್ಳಿ ಯಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಹೋಂ ಕ್ವಾರಂಟೈನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿಗೆ ತೆರಳಿದ್ದ ಸಿ.ಟಿ.ರವಿ ಬೆಳಿಗ್ಗೆ ಚಿಕ್ಕಮಗಳೂರಿಗೆ ಬಂದಿದ್ದರು. ಮುಂಜಾಗ್ರತೆಗಾಗಿ ಬೆಳಿಗ್ಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಸಚಿವರ ಎಲ್ಲಾ ಮುಂದಿನ ಕಾರ್ಯಕ್ರಮಗಳು ಸದ್ಯಕ್ಕೆ ಸ್ಥಗಿತಗೊಂಡಿವೆ.