Select Your Language

Notifications

webdunia
webdunia
webdunia
webdunia

ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್

ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್
mysooru , ಸೋಮವಾರ, 17 ಜುಲೈ 2023 (18:30 IST)
ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯವಾಗಿದೆ.ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವ ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ ಎಂದು ದಿನೇಶ್ ಗುಂಡೂರಾವ್ ಸರಣಿ‌ ಟ್ವೀಟ್ ಮಾಡಿದ್ದಾರೆ.
ಸಂವಿಧಾನದ ಉಳಿವೇ, ಈ ದೇಶದ ಉಳಿವು. ಇದೇ ಈ ಸಭೆಯ ಉದ್ದೇಶ.ಈ ದೇಶದ ಪ್ರತಿಯೊಬ್ಬ ನಾಗರಿಕನ ಬದುಕಿಗೆ ರಕ್ಷಣೆ ಒದಗಿಸಿರುವುದೇ ಸಂವಿಧಾ‌ನ‌‌ ಆದರೆ BJPಯವರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುತ್ತಾರೆ.ಸಂವಿಧಾನ ಬದಲಾಯಿಸುವುದೆಂದರೆ ನಾಗರಿಕರ ಬದುಕಿನ ಹಕ್ಕು ಕಸಿದುಕೊಂಡಂತೆ.ಕೇಂದ್ರದ ಈ ಧೋರಣೆ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೆಲ್ಲಾ ಒಗ್ಗಟ್ಟಾಗಿ ಹೋರಾಡಲೇಬೇಕಿದೆ.ಅಧಿಕಾರದಲ್ಲಿರುವ ಕೇಂದ್ರದ NDA ಕೂಟ ವಿಭಜಿಸುವುದರಲ್ಲಿ ನಂಬಿಕೆಯಿಟ್ಟಿದೆ.ಆದರೆ ನಾವು ಒಗ್ಗೂಡಿಸುವುದರಲ್ಲಿ ನಂಬಿಕೆಯಿಟ್ಟಿದ್ದೇವೆ.ದ್ವೇಷ ಅವರ ದೇವರು, ಪ್ರೀತಿ ನಮ್ಮ ದೇವರು.ಅವರ ಹೃದಯದಲ್ಲಿ ಧರ್ಮಾಂಧತೆಯಿದೆ.
 
ನಮ್ಮಲ್ಲಿ ಕೂಡಿ ಬಾಳುವ ಸೌಹಾರ್ದತೆಯಿದೆ‌. ಸಾಮರಸ್ಯದ ದೇಶ ಕಟ್ಟುವ ಸಲುವಾಗಿಯೇ ಸಮಾನಮನಸ್ಕರ ಈ ಸಭೆ ನಡೆಯುತ್ತಿದೆ ಎಂದು ಸರಣಿ ಟ್ವೀಟ್ ನಡೆಸುವ ಮೂಲಕ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ..
 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ನಿವಾಸದ ಎದುರು ಪ್ರತಿಭಟನೆ