Publish Date: Sun, 30 Jul 2017 (13:08 IST)
Updated Date: Sun, 30 Jul 2017 (13:09 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ಮಾಡಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎನ್ನುವುದು ಎಲ್ಲರಿಗೆ ಗೊತ್ತಿದೆ. ರೆಸಾರ್ಟ್ ರಾಜಕೀಯ ಮಾಡಿದ್ದೇ ಬಿಜೆಪಿಯವರು. ಯಾರನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದರು. ಅದನ್ನೇ ನಾವು ಈಗ ಮಾಡುತ್ತಿದ್ದೇವೆ ಗುಡುಗಿದ್ದಾರೆ
ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಗಳಿಸಲಿದ್ದಾರೆ. ಬಿಜೆಪಿಯವರ ಗತಿ ಮುಂದೆ ಏನಾಗುತ್ತದೆ ಎನ್ನುವುದು ಕಾದು ನೋಡಿ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.