ಐಟಿ ದಾಳಿ ಬೆನ್ನಲೇ ನಟ ಪುನೀತ್ ಮನೆ ಮುಂದೆ ಸಚಿವ ಡಿ.ಕೆ ಶಿವಕುಮಾರ್ ಪ್ರತ್ಯಕ್ಷರಾಗಿದ್ಯಾಕೆ?

Webdunia
ಶುಕ್ರವಾರ, 4 ಜನವರಿ 2019 (08:05 IST)
ಬೆಂಗಳೂರು : ಗುರುವಾರ ರಾಜಕೀಯ ನಾಯಕರ ಮನೆಗೆ ಹಾಗೂ ಸ್ಯಾಂಡಲ್ ವುಡ್ ಹೀರೋಗಳ ಮನೆಗೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದರು, ಆದರೆ ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ಪ್ರತ್ಯಕ್ಷರಾಗಿ ಆಶ್ಚರ್ಯ ಮೂಡಿಸಿದ್ದಾರೆ.


ಹೌದು. ಗುರುವಾರ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್ ,ಯಶ್  ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಅದರ ಜೊತೆಗೆ ಸಚಿವ ಡಿ.ಕೆ ಶಿವಕುಮಾರ್ ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಿ ತೆರಳಿದ್ದರು. ಈ ಹಿನ್ನಲೆಯಲ್ಲಿ ಸಚಿವ ಡಿಕೆಶಿವಕುಮಾರ್ ಹಾಗೂ ಅವರ ತಾಯಿ ಗೌರಮ್ಮ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.


ಇದಾದ ನಂತರ ರಾತ್ರಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ನಟ ಪುನೀತ್ ರಾಜ್‍ಕುಮಾರ್ ಮನೆ ಮುಂದೆ ತಮ್ಮ ಕಾರಿನಿಂದ ಇಳಿದಿದ್ದಾರೆ. ಐಟಿ ದಾಳಿ ಕುರಿತು ಇನ್ನೂ ಮುಗಿದಿಲ್ವಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ. ನಂತರ ಏನೂ ಆಗೋದಿಲ್ಲ ತಲೆ ಕೆಡಿಸಿಕೊಳ್ಳಬೇಡಿ ಅಂತ ಅಪ್ಪು ಅಭಿಮಾನಿಗಳಲ್ಲಿ ಧೈರ್ಯ ತುಂಬಿ ನಡೆದುಕೊಂಡೇ ಮನೆಗೆ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments