Publish Date: Thu, 05 Oct 2017 (16:28 IST)
Updated Date: Thu, 05 Oct 2017 (16:30 IST)
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಇಂದು ಹಾಜರಾಗಿದ್ದಾರೆ.
ಆದಾಯ ತೆರಿಗೆ ಇಲಾಖೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮುಂದೆ ಹಾಜರಾಗಿದ್ದೆ. ಅವರು ಕೇಳದ ದಾಖಲೆಗಳನ್ನು ನೀಡಿದ್ದೇನೆ. ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಮುಂದಿನ ವಾರ ಮತ್ತೆ ಐಟಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ, ಮುಂದಿನ ವಾರ ಕೂಡಾ ವಿಚಾರಣೆಗೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಐಟಿ ಅಧಿಕಾರಿಗಳು ಸಚಿವ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ನಡೆಸಿ ಸುಮಾರು ಎರಡು ದಿನಗಳ ಕಾಲ ತಪಾಸಣೆ ನಡೆಸಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.