Publish Date: Thu, 30 Apr 2026 (14:11 IST)
Updated Date: Thu, 30 Apr 2026 (14:13 IST)
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಡಾ ಜಿ ಪರಮೇಶ್ವರ್ ಅದಕ್ಕೆ ಸೂಕ್ತ ಕಾರಣವನ್ನೂ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಈಗ ಮತ್ತೆ ಚಾಲ್ತಿಯಲ್ಲಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಿಎಂ ಬದಲಾವಣೆ ಚರ್ಚೆ ಜೋರಾಗುವ ಸುಳಿವು ಸಿಕ್ಕಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ.
ಇದರ ನಡುವೆ ಗೃಹಸಚಿವ ಡಾ ಜಿ ಪರಮೇಶ್ವರ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವಾಗ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಒಪ್ಪಿಕೊಳ್ಳುತ್ತೇವೆ ಎಂದಿದ್ದರು. ಅವರ ಈ ಹೇಳಿಕೆ ಭಾರೀ ಸಂಚಲನ ಮೂಡಿಸಿತ್ತು. ಅದರ ಬಗ್ಗೆ ಇಂದು ಮತ್ತೆ ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ. ಯಾಕೆಂದರೆ ಖರ್ಗೆ ಸಮಕಾಲೀನರಾದ ಬಂಗಾರಪ್ಪನವರು, ವೀರಪ್ಪ ಮೊಯಿಲಿಯವರು, ಗುಂಡೂರಾವ್ ಅವರು ಎಲ್ಲರೂ ಸಿಎಂ ಆಗಿದ್ದರು. ಆದರೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಖರ್ಗೆ ಸಿಎಂ ಆದರೆ ಸಂತೋಷ ಎಂದು ಹೇಳಿದ್ದೇನಷ್ಟೇ. ಅಂತಿಮವಾಗಿ ಎಲ್ಲವೂ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ