Webdunia - Bharat's app for daily news and videos

Install App

ಕೊರೊನಾ ಚಿಕಿತ್ಸೆಗೆ ನೋ ಎಂದರೆ ಕಾನೂನು ಕ್ರಮ ಖಚಿತ ಎಂದ ಸಚಿವ

Webdunia
ಭಾನುವಾರ, 15 ಮಾರ್ಚ್ 2020 (17:45 IST)
ಕೊರೊನಾ ವೈರಸ್ ಹಿನ್ನಲೆ ಆರೋಗ್ಯ ಸಚಿವ ಶ್ರೀರಾಮಲು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೆ ವೇಳೆ ಮಾತನಾಡಿದ ಅವರು, ರಾಜ್ಯದ ಜನರು ಭಯ ಪಡುವುದು ಬೇಡ. ಈಗಾಗಲೇ ಕೊರೊನಾ ವೈರಸ್ ನಿಂದ 63 ಸಾವಿರ ಜನರು ಗುಣ ಮುಖರಾಗಿದ್ದಾರೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಕ್ರಮ ಕೈಗೊಂಡಿದೆ.‌‌ ಮೃತನ ಕುಟುಂಬಸ್ಥರ ಮೂವರ ರಿಪೋರ್ಟ್ ನೆಗೆಟಿವ್ ಬಂದಿದೆ. ಇಂದು ಸಂಜೆ ಮತ್ತೊಬ್ಬರ ವರದಿ ಬರಲಿದೆ. ರಿಪೋರ್ಟ್ ನೆಗೆಟಿವ್ ಅಥವಾ ಪಾಸಿಟಿವ್ ಏನೇ ಬಂದರೂ ಜನ ಭಯ ಭೀತರಾಗೊದು ಬೇಡ ಎಂದರು.

ಕೊರೊನಾ ವೈರಸ್ ತಡೆಗಟ್ಟಲು ಸಿಎಂ ಬಿ.ಎಸ್. ಯಡಿಯೂರಪ್ಪನವರು ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದ್ದಾರೆ. ಜಿಲ್ಲೆಗೆ ವಿದೇಶದಿಂದ 16  ಜನ ಬಂದಿದ್ದಾರೆ. ಅವರನ್ನು ಹೊಮ್ ಐಸೋಲೇಷನ್ ನಲ್ಲಿ ಇಟ್ಟು ನಿಗಾ ವಹಿಸಲಾಗುತ್ತಿದೆ. ವಿದೇಶದಿಂದ ಬಂದವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಯಾರಾದರೂ ತಪಾಸಣೆ ಮಾಡಿಸಿಕೊಳ್ಳಲು ಹಿಂದೇಟು ಹಾಕಿದರೆ  ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶ್ರೀರಾಮುಲು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments