Publish Date: Sun, 23 Sep 2018 (20:05 IST)
Updated Date: Sun, 23 Sep 2018 (20:09 IST)
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿ ಸಚಿವರಾದವರು ಕಾಂಗ್ರೆಸ್ ಪಕ್ಷದ ವಿರುದ್ಧವೇ ವಿವಾದಾತ್ಮಕ ಹೇಳಿಕೆ ನೀಡಿರುವ ಘಟನೆ ನಡೆದಿದೆ.
ಶಿಕ್ಷಣ ಸಚಿವ ಎನ್.ಮಹೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಗಿಡವನ್ನು ಕಡಿಯುವ ಕೆಲಸವನ್ನು ಮಾಡಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಕಾಂಗ್ರೆಸ್ ಗಿಡ ತುಂಬಾ ಅಪಾಯಕಾರಿ, ಹೀಗಾಗಿ ಅದನ್ನು ಕಡಿಯುವಂತಹ ಕೆಲಸವನ್ನು ಮಾಡಿದ್ದೇವೆ ಎನ್ನುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಚಾಮರಾಜನಗರದಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದರು.