Select Your Language

Notifications

webdunia
webdunia
webdunia
webdunia

ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಇಡಿ ವಶ

Minister Group Managing Director
bangalore , ಶನಿವಾರ, 25 ಜೂನ್ 2022 (20:30 IST)
ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸುಶೀಲ್ ಪಾಂಡುರಂಗ್ ಸಮಂಜಸ ಉತ್ತರಗಳು ನೀಡದ ಕಾರಣ ವಶಕ್ಕೆ ಪಡೆಯಲಾಗಿತ್ತು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಪಾಂಡುರಂಗ್ ಅವರನ್ನು ಕೋರ್ಟ್ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ. ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿದ ಆರೋಪ ಅವರ ಮೇಲಿದೆ. ಈ ಕುರಿತು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಸಾರ್ವಜನಿಕರು ಜಾರಿ ನಿರ್ದೇಶನಾಲಯಕ್ಕೂ ದೂರು ನೀಡಿದ್ದರು. ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ಮಂತ್ರಿ ಗ್ರೂಪ್ ಕಟ್ಟಡಗಳ ಮೇಲೆ ದಾಳಿ ಮಾಡಿತ್ತು. ಈ ವೇಳೆ ಹಲವು ಮಹತ್ವದ ದಾಖಲೆಗಳು ಲಭ್ಯವಾಗಿದ್ದವು. ನಗದು ರೂಪದಲ್ಲಿ ವ್ಯವಹಾರ, ಹವಾಲಾ ರೂಪದಲ್ಲಿ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಬೆಳಕಿಗೆ ಬಂದಿತ್ತು. ಹಾಗಾಗಿ ಇಡಿ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಜನಾದ್ರಿ ಅಭಿವೃದ್ಧಿ ಕೂರಿತು ಸಭೆ