Publish Date: Mon, 09 Oct 2017 (16:29 IST)
Updated Date: Mon, 09 Oct 2017 (16:31 IST)
ಮುಂದಿನ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವುದೇ ಗುರಿ ಎಂದಿರುವ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್‌ಗೆ ಸಾರಿಗೆ ಖಾತೆ ಸಚಿವ ಎಚ್.ಎಂ.ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವುದು, ಗೆಲ್ಲಿಸುವುದು ಮತದಾರರಿಗೆ ಬಿಟ್ಟ ವಿಷಯವಾಗಿದೆ. ಮತದಾರರು ಮನಸ್ಸು ಮಾಡಿದಲ್ಲಿ ಗೆಲ್ಲಿಸುತ್ತಾರೆ, ಇಲ್ಲವೇ ಸೋಲಿಸುತ್ತಾರೆ ಎಂದರು.
ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ತವಕದಲ್ಲಿರುವ ಶ್ರೀನಿವಾಸ್ ಪ್ರಸಾದ್ ಯಾಕೆ ನಂಜನಗೂಡು ಉಪ ಚುನಾವಣೆಯಲ್ಲಿ ಸೋತಿದ್ದಾರೆ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕರಿಗೆ ಮಾಡಲು ಕೆಲಸವಿಲ್ಲ. ಇಂತಹ ಆರೋಪಗಳನ್ನು ಮಾಡುವುದೇ ಕಾಯಕವಾಗಿದೆ ಎಂದು ತಿರುಗೇಟು ನೀಡಿದರು.
ಸಿಎಂ ಸಿದ್ದರಾಮಯ್ಯರ ಜನಪರ, ರೈತಪರ ಯೋಜನೆಗಳಿಂದ ವಿಪಕ್ಷಗಳು ಕಂಗಾಲಾಗಿವೆ. ಸರಕಾರದ ಜನಪ್ರಿಯತೆಯನ್ನು ಸಹಿಸಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.