Publish Date: Fri, 01 Sep 2017 (13:12 IST)
Updated Date: Fri, 01 Sep 2017 (13:14 IST)
ಇಂದು ಸಂಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕ ಆರ್.ಬಿ.ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ, ಸಚಿವ ಜಯಚಂದ್ರ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಳ್ಳು ವಿಳಾಸ ನೀಡಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಿದ್ದಲ್ಲದೇ ತಿಮ್ಮಾಪುರ್ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತ್ತು.
ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಎರಡು ತಿಮ್ಮಾಪುರ್ ವಿರುದ್ಧದ ಎರಡು ಆರೋಪಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಿಮ್ಮಾಪುರ್ ವಿರುದ್ಧದ ಆರೋಪಗಳ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
Rajesh patil
Publish Date: Fri, 01 Sep 2017 (13:12 IST)
Updated Date: Fri, 01 Sep 2017 (13:14 IST)