Select Your Language

Notifications

webdunia
webdunia
webdunia
webdunia

ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ

ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ
ಪಶ್ಚಿಮ ಬಂಗಾಳ , ಶುಕ್ರವಾರ, 27 ಅಕ್ಟೋಬರ್ 2023 (20:22 IST)
ಪಡಿತರ ವಿತರಣೆ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ‘ ಪಶ್ಚಿಮ ಬಂಗಾಳದ ಕಾಂಗ್ರೆಸ್‌ನ ಮಾಜಿ ಆಹಾರ ಸಚಿವ ಹಾಗೂ ಹಾಲಿ ಅರಣ್ಯ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಲಾಗಿದೆ.

ಜಾರಿ ನಿರ್ದೇಶನಾಲಯವು ಕೊಲ್ಕತ್ತಾದ ಅವರ ಮನೆಯಲ್ಲಿ 20 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿದ ಬಳಿಕ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಿದೆ. ಇಂದು ಮಲ್ಲಿಕ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆದರೆ ಅದಕ್ಕೂ ಮುನ್ನ ಇಂದು ಬೆಳಗ್ಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಮಾಜಿ ಆಹಾರ ಸಚಿವ ಜ್ಯೋತಿಪ್ರಿಯ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಬೆಳಗ್ಗೆ 8.30ರ ಸುಮಾರಿಗೆ ಸಿಜಿಒ ಸಂಕೀರ್ಣದಿಂದ ಜೋಕಾ ಇಎಸ್‌ಐ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಬ್ಯಾಂಕ್‌ಶಾಲ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಕಳುವಾಗಿದ್ದ ಮಗು ತಮಿಳುನಾಡಿನಲ್ಲಿ ಪತ್ತೆ