Select Your Language

Notifications

webdunia
webdunia
webdunia
webdunia

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕಾಗೋಡು ತಿಮ್ಮಪ್ಪ

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕಾಗೋಡು ತಿಮ್ಮಪ್ಪ
ಚಿಕ್ಕಬಳ್ಳಾಪುರ , ಗುರುವಾರ, 25 ಆಗಸ್ಟ್ 2016 (17:15 IST)
ಕಂದಾಯ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುವಂತೆ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
 
ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪನವರು ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
 
ಕಂದಾಯ ಇಲಾಖೆಯ ಆಡಳಿತ ಯಂತ್ರ ಕುಸಿದಿದೆ. ಕೂಡಲೇ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಆಡಳಿತ ಯಂತ್ರವನ್ನು ಸರಿ ದಾರಿಗೆ ತರುವುದೇ ನನ್ನ ಗುರಿ. ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜನ್ಮಾಷ್ಮಮಿ ಪ್ರಯುಕ್ತ ದೇಶಕ್ಕೆ ಮೋದಿ ಶುಭಾಸಯ