Publish Date: Thu, 23 Aug 2018 (15:44 IST)
Updated Date: Thu, 23 Aug 2018 (15:48 IST)
ಕಾವೇರಿ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದ ನಿವಾಸಿಗಳ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿದರು.
ಕುಶಾಲನಗರಕ್ಕೆ ವಸತಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿದರು. ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡ ನಿವಾಸಿಗಳ ವಸತಿ ಪ್ರದೇಶಗಳ ಪರಿಶೀಲನೆ ನಡೆಸಿದರು.
ಕುಶಾಲನಗರ ವ್ಯಾಪ್ತಿಯಲ್ಲಿ ಆರು ಎಕರೆ ಪ್ರದೇಶದಲ್ಲಿ 140 ಮಂದಿಗೆ ವಸತಿ ಸಮುಚ್ಛಯ ನಿರ್ಮಿಸುವ ಭರವಸೆಯನ್ನು ಸಂತ್ರಸ್ತರಿಗೆ ಸಚಿವ ಖಾದರ್ ನೀಡಿದರು.
ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸುವ ಭರವಸೆಯನ್ನು ಯು.ಟಿ. ಖಾದರ್ ನೀಡಿದರು. ಸರಕಾರ ಜನರ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತದೆ ಎಂದು ಹೇಳಿದರು.