Publish Date: Sat, 16 Sep 2017 (16:56 IST)
Updated Date: Sat, 16 Sep 2017 (16:58 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ನೈತಿಕ ಹೊಣೆ ಹೊತ್ತು ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗಣಪತಿ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುತ್ತಿರುವಾಗ ಸಚಿವ ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿ ಸಿಐಡಿ ತನಿಖೆಯಲ್ಲಿ ಕ್ಲೀನ್‌ಚಿಟ್ ಪಡೆದಿದ್ದಾರೆ. ಇದೀಗ ಮತ್ತೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕೇಂದ್ರ ಸರಕಾರದಲ್ಲಿ ಹಲವಾರು ಸಚಿವರು ಸಿಬಿಐ ತನಿಖೆ ಎದುರಿಸುತ್ತಿದ್ದಾರೆ. ಅವರೆಲ್ಲಾ ರಾಜೀನಾಮೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಸಿಎಂ, ಬಿಜೆಪಿ ಢೋಂಗಿ ಹೋರಾಟಕ್ಕೆ ಮಣಿಯುವುದಿಲ್ಲ ಎಂದು ಗುಡುಗಿದ್ದಾರೆ.
ಬಿಜೆಪಿಯವರು ಎಷ್ಚೇ ಹೋರಾಟ ಮಾಡಿದರೂ ಜಾರ್ಜ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಬಿಜೆಪಿಯವರ ಹೋರಾಟ ಕೇವಲ ಚುನಾವಣೆ ಗಿಮಿಕ್. ಇವರಿಗೆ ಯಾರೊಬ್ಬರ ಬಗ್ಗೆಯೂ ನಿಜವಾದ ಕಾಳಜಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.