Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನ ಬಿಡುವ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಚಿವ ಕೃಷ್ಣ ಬೈರೇಗೌಡ

Minister Krishna Bairegowda

Sampriya

ಬೆಂಗಳೂರು , ಶನಿವಾರ, 25 ಅಕ್ಟೋಬರ್ 2025 (16:04 IST)
Photo Credit X
ಬೆಂಗಳೂರು: ಕಾಂಗ್ರೆಸ್ ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದ್ದು, ಹೈಕಮಾಂಡ್ ಹೇಳಿದ್ದಲ್ಲಿ ನಾನು ಸಚಿವ ಸ್ಥಾನ ನೀಡಲು ರೆಡಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. 

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲವನ್ನೂ ನೀಡಿದ್ದು, ಅರ್ಹತೆಗೂ ಮೀರಿ ಅವಕಾಶಗಳು ಸಿಕ್ಕಿದೆ. 

ನನ್ನನ್ನು ಗುರುತಿಸಿ ಪಕ್ಷ ಎಲ್ಲ ಅವಕಾಶಗಳನ್ನು ನೀಡಿದ್ದು, ‌ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ. 

ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ, ಅವಕಾಶದ ವಿಚಾರದಲ್ಲಿ ನಾನು ಸಂತೃಪ್ತನಾಗಿದ್ದೇನೆ ಎಂದರು.

ಇನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ಪುನರ್ ರಚನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ರಚನೆಯ ಸಂದರ್ಭದಲ್ಲೇ ಬೇರೆಯವರಿಗೂ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿತ್ತು. ಸಚಿವ ಸ್ಥಾನ ಪಡೆಯುವ ಮುನ್ನವೇ ಗಮನಕ್ಕೆ ತಂದು ಸಂಪುಟ ರಚಿಸಲಾಗಿತ್ತು. ಈ ಸರ್ಕಾರ ಬಂದಾಗಲೇ ಈ ನಿರ್ಧಾರ ಆಗಿತ್ತು. ಹೊರಗಡೆ ಇದ್ದವರಿಗೆ ಅವಕಾಶ ಕೊಡಬೇಕು ಎಂಬ ನಿರ್ಧಾರ ಮಾಡಲಾಗಿತ್ತು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ED ಆಡಿಟ್ ಆಗಲಿ, ತನಿಖೆಗೆ ನಾವು ಸಿದ್ದ, ನಿಮ್ಮ RSS ಸಿದ್ದವೇ