ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ರದ್ದು ಕೋರಿ ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್ ಜಾರಿ ಮಾಡಿದೆ.
ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.
ಎಸ್‌ಪಿಪಿ ಬಿ.ಎ.ಬೆಳ್ಳಿಯಪ್ಪ ಅವರು,ರವಿ ಅವರ ಧ್ವನಿ ಮಾದರಿ ಪಡೆಯಲು ಅವಕಾಶ ನೀಡಬೇಕೆಂದು. ಸದನದ ವ್ಯಾಪ್ತಿಯ ಚರ್ಚೆಗೆ ಮಾತ್ರ ಕ್ರಮದಿಂದ ವಿನಾಯಿತಿ ಇದೆ. ಟೇಬಲ್ ಮುರಿದು ದಾಂಧಲೆ, ಅಶ್ಲೀಲ ಪದ ಬಳಕೆಗೆ ವಿನಾಯಿತಿ ಇಲ್ಲ ಎಂದು ವಾದಿಸಿದರು.