Webdunia - Bharat's app for daily news and videos

Install App

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ನಿಂದನೆ ಪ್ರಕರಣ: ಹೈಕೋರ್ಟ್‌ನಲ್ಲಿ ಸಿ.ಟಿ. ರವಿಗೆ ಬಿಗ್‌ ರಿಲೀಫ್‌

Sampriya
ಗುರುವಾರ, 30 ಜನವರಿ 2025 (14:08 IST)
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣದಲ್ಲಿ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿಟಿ ರವಿ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದು ಕೋರಿ  ಸಿ.ಟಿ. ರವಿ  ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ.20 ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆ ನೀಡಿ ನೀಡಿ ದೂರುದಾರೆ ಲಕ್ಷ್ಮಿ ಹೆಬ್ಬಾಳ್ಕರ್ ನೋಟಿಸ್‌ ಜಾರಿ ಮಾಡಿದೆ.

ರವಿ ಪರ ವಾದ ಮಂಡಿಸಿದ ಪ್ರಭುಲಿಂಗ ನಾವದಗಿ, ಸದನದೊಳಗೆ ಭೀತಿರಹಿತವಾಗಿ ಮಾತನಾಡಲು ಅವಕಾಶವಿದೆ. ಮಾನನಷ್ಟ ಪ್ರಕರಣದ ಭೀತಿಯಿಲ್ಲದೇ ಚರ್ಚೆ ನಡೆಸಬಹುದು. ಮಹಿಳೆ ಗೌರವಕ್ಕೆ ಧಕ್ಕೆಯಾಗುವ ಮಾತುಗಳಿದ್ದರೂ ಸಭಾಪತಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ಎಸ್‌ಪಿಪಿ ಬಿ.ಎ.ಬೆಳ್ಳಿಯಪ್ಪ ಅವರು,ರವಿ ಅವರ ಧ್ವನಿ ಮಾದರಿ ಪಡೆಯಲು ಅವಕಾಶ ನೀಡಬೇಕೆಂದು. ಸದನದ ವ್ಯಾಪ್ತಿಯ ಚರ್ಚೆಗೆ ಮಾತ್ರ ಕ್ರಮದಿಂದ ವಿನಾಯಿತಿ ಇದೆ. ಟೇಬಲ್ ಮುರಿದು ದಾಂಧಲೆ, ಅಶ್ಲೀಲ ಪದ ಬಳಕೆಗೆ ವಿನಾಯಿತಿ ಇಲ್ಲ ಎಂದು ವಾದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments