ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಂಫರ್ ಆಫರ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Sampriya
ಸೋಮವಾರ, 2 ಸೆಪ್ಟಂಬರ್ 2024 (18:53 IST)
ಬೆಂಗಳೂರು: ಈಗಾಗಲೇ ಗೃಹಲಕ್ಷ್ಮೀಯಿಂದ ಹಣಪಡೆಯುತ್ತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೊಂದು ಬಹುಮಾನ ಗೆಲ್ಲುವ ಅವಕಾಶ ಅವಕಾಶ ಕಲ್ಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾಗಿರು ಗೃಹಲಕ್ಷ್ಮೀ ಜಾರಿಯಾಗಿ ವರ್ಷವಾಗಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶ ಕಲ್ಪಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಿಂದ ಏನೆಲ್ಲ ಬದಲಾವಣೆಯಾಗಿದೆ ಎಂಬುದನ್ನು ತಿಳಿಯಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ  ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಸೆಪ್ಟೆಂಬರ್ 30ರೊಳಗೆ ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ತಿಳಿಸಿದ್ದಾರೆ.

ಮೊದಲ 50 ಮನೆಯೊಡತಿಯರಿಗೆ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ. ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments