ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಬೇಸರಗೊಂಡಿರುವ ಮನೆ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಕೊಡುವುದಾಗಿ ಅಧಿಕಾರಕ್ಕೇರಿತ್ತು. ಇದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದುದು. ಪ್ರತೀ ತಿಂಗಳು ಕುಟುಂಬದ ಯಜಮಾನಿಯ ಖಾತೆಗೆ 2,000 ರೂ. ಹಣ ಜಮೆ ಆಗಬೇಕು. ಆದರೆ ಕಳೆದ ಎರಡು ತಿಂಗಳಿನಿಂದ ಸರಿಯಾಗಿ ಹಣ ಜಮೆ ಆಗಿಲ್ಲ.
ಇದರಿಂದ ಜನ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಹಣ ಇನ್ನೂ ಬಂದಿಲ್ಲ. ಇದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿಯವರು ಗೃಹಲಕ್ಷ್ಮಿಯನ್ನು ಕಾಪಿ ಮಾಡಿಕೊಂಡು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ ಮಾಡೆಲ್ ಮಾಡಿದ್ದಾರೆ. ಆದಷ್ಟು ಬೇಗ ನಾವು ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.