Publish Date: Sat, 14 Jan 2017 (10:25 IST)
Updated Date: Sat, 14 Jan 2017 (10:28 IST)
ಜಲ ಸಂಪನ್ಮೂಲ ಖಾತೆ ಸಚಿವ ಎಂ.ಬಿ. ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಕಾರ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದ್ದು ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಸಚಿವ ಪಾಟೀಲ್ ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ನಡೆಯಲಿರುವ ಸಿದ್ಧರಾಮೇಶ್ವರ ಜಯಂತಿ ಉದ್ಘಾಟನೆಗೆ ಸಾಗುತ್ತಿದ್ದಾಗ ಕೆರೂರು ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಘಟನೆ ನಡೆದಿದೆ.
ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ.
ಸಚಿವರು, ಅವರ ಕಾರ್ ಚಾಲಕ ಶಂಕರ್, ಭದ್ರತಾ ಸಿಬ್ಬಂದಿ ಬಿ.ಮಹಾಂತೇಶ್, ಕಾಂಗ್ರೆಸ್ ಮುಖಂಡ ಸಿದ್ದಣ್ಣ ಸಕ್ರಿ, ಛಾಯಾಗ್ರಾಹಕ ಪ್ರಸನ್ನ ಪಾಟೀಲ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ.
ಘಟನೆ ಬಳಿಕ ಸಚಿವರು ಬೇರೆ ಕಾರಿನಲ್ಲಿ ಪ್ರಯಾಣಿಸಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.