ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಮಧುಬಂಗಾರಪ್ಪ ಅವರು ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪ್ರತಿಕ್ರಿಯಿಸಿದರು.
ಸದ್ಯ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ವಿಚಾರವಾಗಿ ಅವರು ವಿಧಾನಸೌಧದಲ್ಲಿ ಮಾತನಾಡಿ, ನಮ್ಮಲ್ಲಿ ಯಾವುದೇ ಬಣಗಳಿಲ್ಲ. ಇನ್ನೂ ನಾನು ಯಾವ ಬಣದಲ್ಲೂ ಗುರುತಿಸಿಕೊಂಡಿಲ್ಲ.
ಇನ್ನೂ ದೆಹಲಿಗೆ ಶಾಸಕರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮಲ್ಲಿ ಯಾವುದೇ ಬಣ ಇಲ್ಲ. ನಾನು ಯಾರ ಬಣದಲ್ಲಿ ಇಲ್ಲ. ದೆಹಲಿಗೆ ಶಾಸಕರ ಭೇಟಿ ಬಗ್ಗೆ ಮಾತನಾಡಿದ ಅವರು ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ. 2.5 ವರ್ಷ ಅಗ್ರಿಮೆಂಟ್ ವಿಷಯ ನಮಗೇನು ಗೊತ್ತಿಲ್ಲ ಎಂದರು.
ಇನ್ನೂ ನಮ್ಮ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ, ಡಿಸಿಎಂ ಭೇಟಿಯಾಗಿರುವುದು ಏನೂ ವಿಶೇಷವಲ್ಲ. ಏನಾದರು ಗೊಂದಲಗಳು ಇದ್ದರೆ ಹೈಕಮಾಂಡ್ ಅದನ್ನ ಸರಿ ಮಾಡುತ್ತದೆ.