Publish Date: Sun, 24 May 2026 (16:39 IST)
Updated Date: Sun, 24 May 2026 (16:42 IST)
ಬೆಂಗಳೂರು: ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಒಪ್ಪಿಕೊಂಡಿದ್ದಾರೆ. ಈ ಹಿಂದೆ ಮಧು ಬಂಗಾರಪ್ಪ ಅವರು ನನಗೆ ಕನ್ನಡ ಸರಿಯಾಗಿ ಬರುವುದಿಲ್ಲ ಎಂದು ಹೇಳುವ ಮೂಲಕ ಟೀಕೆಗೆ ಗುರಿಯಾಗಿದ್ದರು.
ಇನ್ನೂ ಈ ಹೇಳಿಕೆ ಬಳಿಕ ಆನ್‌ಲೈನ್ ಸಂವಾದವೊಂದರಲ್ಲಿ ವಿದ್ಯಾರ್ಥಿಯೊಬ್ಬ ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ಹೇಳಿದಾಗ ಭಾರೀ ವಿವಾದ ಸೃಷ್ಟಿಯಾಗಿತ್ತು. ಶಿಕ್ಷಣ ಸಚಿವರಿಗೆ ಈ ಘಟನೆ ಭಾರೀ ಮುಜುಗರ ಉಂಟು ಮಾಡಿತ್ತು. ಇನ್ನೂ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೂ ಸೂಚಿಸಿದ್ದರು.
ಇದೀಗ ಇಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡುವಾಗ ನನಗೆ ಕನ್ನಡ ಓದಲು ಬರುತ್ತೆ, ಬರೆಯಲು ಬರಲ್ಲ ಎಂದು ಹೇಳುವ ಮೂಲಕ ಒಪ್ಪಿಕೊಂಡಿದ್ದಾರೆ.
ಇದು ಶಿಕ್ಷಣ ಸಚಿವರ ಈ ಹೇಳಿಕೆಗೆ ಇದೀಗ ವಿಧವಿಧವಾದ ಕಮೆಂಟ್ಸ್ ಬರುತ್ತಿದೆ. ಒಬ್ಬರು ಶಿಕ್ಷಣ ಸಚಿವ, ಮಾಜಿ ಮುಖ್ಯಮಂತ್ರಿ ಮಗ, ಕನ್ನಡ ಕಡ್ಡಾಯ ಮಾಡಿದ್ದು ಯಾಕೇ..? ಕನ್ನಡ ಸಂಘಟನೆಗಳು ಯಾರ ಮೇಲೂ ಹೋರಾಟ ಮಾಡುವ ಯೋಗ್ಯತೆ ಇಲ್ಲ ಎಂದು ಬರೆದುಕೊಂಡಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ