Webdunia - Bharat's app for daily news and videos

Install App

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದ ಸ್ವಾಮೀಜಿ ವಿರುದ್ಧ ಸಚಿವ ಮಹದೇವಪ್ಪ ಕೆಂಡಾಮಂಡಲ

Krishnaveni K
ಬುಧವಾರ, 27 ನವೆಂಬರ್ 2024 (11:38 IST)
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು. ಆಗ ನಾವು ನೆಮ್ಮದಿಯಾಗಿ ಇರಬಹುದು ಎಂದ ವಿಶ್ವ ಒಕ್ಕಲಿಗ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಸಚಿವ ಮಹದೇವಪ್ಪ ಕೆಂಡಾಮಂಡಲರಾಗಿ ಪ್ರತಿಕ್ರಿಯಿಸಿದ್ದಾರೆ.

ವಕ್ಫ್ ವಿರುದ್ಧ ಸ್ವಾಮೀಜಿಗಳು ಒಗ್ಗಟ್ಟಾಗಿ ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಬಹುದು. ವಕ್ಫ್ ಬೋರ್ಡ್ ಎನ್ನುವುದೇ ಇರಬಾರದು. ಅಷ್ಟು ಪ್ರೀತಿಯಿದ್ದರೆ ನಿಮ್ಮ ಮನೆ, ಸೈಟು ಬರೆದು ಕೊಡಿ’ ಎಂದು ಸ್ವಾಮೀಜಿ ಹೇಳಿದ್ದರು.

ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಇದರ ಬಗ್ಗೆ ಸಚಿವ ಮಹದೇವಪ್ಪ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಧ್ವೇಷ ಹರಡುವ ಇಂತಹವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು’ ಎಂದು ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಷ್ಟೊಂದು ಹೋರಾಟ ನಡೆಸಿ ಬಾಬಾ ಸಾಹೇಬರು ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು,ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು. ಇದು ಮೂಲಭೂತ ಹಕ್ಕು. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ಇದೆ. ಯಾರಾದರೂ ಹಾಗೆ ಹೇಳಿದರೆ ಅದು ತಪ್ಪು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments