ಸಹಕಾರಿ ಮತ್ತು ಸಕ್ಕರೆ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನ ದುಃಖ ತಂದಿದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಅವರು ಸಂತಾಪ ಸೂಚಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಹೊಸ ವರ್ಷಾಚರಣೆ ವೇಳೆ ರಾಜಧಾನಿಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಅವರು, ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇನ್ನು ಯಾರೇ ತಪ್ಪಿತಸ್ಥರಾಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಯಾರು ಕೂಡಾ ದೂರು ನೀಡಿಲ್ಲ. ಆದರೆ, ನಾನು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದೇನೆ ಎಂದು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ