Select Your Language

Notifications

webdunia
webdunia
webdunia
webdunia

ಸಚಿವ ಎಂ.ಬಿ.ಪಾಟೀಲ್ ತಲೆ ತಿರುಕ: ಬಿಎಸ್‌ವೈ

ಸಚಿವ ಎಂ.ಬಿ.ಪಾಟೀಲ್ ತಲೆ ತಿರುಕ: ಬಿಎಸ್‌ವೈ
ಕೊಪ್ಪಳ , ಬುಧವಾರ, 20 ಸೆಪ್ಟಂಬರ್ 2017 (13:27 IST)
ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಒಬ್ಬ ತಲೆ ತಿರುಕ. ಆದ್ದರಿಂದ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಾನು ಬಸವೇಶ್ವರರ ಉತ್ತರಾಧಿಕಾರಿ ಎಂದು ಸಚಿವ ಪಾಟೀಲ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇಂತಹ ಬಾಲಿಶ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲಾರೆ ಎಂದು ತಿರುಗೇಟು ನೀಡಿದ್ದಾರೆ.
 
ಬಿಜೆಪಿ ಪಕ್ಷದ ಹೈಕಮಾಂಡ್ ಉತ್ತರ ಕರ್ನಾಟಕದಲ್ಲಿ ಸ್ಪರ್ಧಿಸುವಂತೆ ಸೂಚನೆ ನೀಡಿದೆ. ಅದರಂತೆ, ವಿಜಯಪುರ ಅಥವಾ ಬಾಗಲಕೋಟೆಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಪ್ರತ್ಯೇಕ ಲಿಂಗಾಯುತ ಧರ್ಮಕ್ಕಾಗಿ ಹೋರಾಟ ನಡೆಸುತ್ತಿರುವ ಸಚಿವ ಎಂ.ಬಿ.ಪಾಟೀಲ್, ವೀರಶೈವರು ಒಪ್ಪಲಿ ಬಿಡಲಿ ನಮ್ಮ ಹೋರಾಟ ಮುಂದುವರಿಯಲಿದೆ. ರಾಜಕೀಯ ಕಾರಣಗಳಿಗಾಗಿ ಯಡಿಯೂರಪ್ಪ ಬೆಂಬಲ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್`ನ 35ಕ್ಕೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ..?