ಲೋಕಸಭೆ ಚುನಾವಣೆ ಬಳಿಕ ಮೊದಲ ವಿಕೆಟ್ ಪತನ: ಸಚಿವ ನಾಗೇಂದ್ರ ರಾಜೀನಾಮೆ

Krishnaveni K
ಗುರುವಾರ, 6 ಜೂನ್ 2024 (16:40 IST)
ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಮೊದಲ ವಿಕೆಟ್ ಪತನವಾಗಿದೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ರೂ. ಹಗರಣ ಮತ್ತು ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಹೆಸರು ಕೇಳಿಬರುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಬಿಜೆಪಿ ಒತ್ತಾಯಿಸಿತ್ತು.

ಇದೀಗ ತೀವ್ರ ಒತ್ತಡಕ್ಕೆ ಮಣಿದ ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಸ್ವತಃ ಸಿದ್ದರಾಮಯ್ಯ ರಾಜೀನಾಮೆ ನೀಡಲು ನಾಗೇಂದ್ರಗೆ ಸೂಚಿಸಿದ್ದರು. ಸಿಎಂ ಭೇಟಿ ಮಾಡಿದ ಬಳಿಕ ರಾಜೀನಾಮೆ ಸಲ್ಲಿಸಿದ ಅವರು ಮಾಧ್ಯಮಗಳಿಗೆ ಯಾವುದೆ ಹೇಳಿಕೆನೀಡದೇ ನಿರ್ಗಮಿಸಿದ್ದಾರೆ.

ನಾಗೇಂದ್ರ ರಾಜೀನಾಮೆಗೆ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,  ಹಗರಣದಲ್ಲಿ ನಾಗೇಂದ್ರ ಪಾತ್ರವಿಲ್ಲ. ಆದರೆ ಪಕ್ಷದ ಘನತೆಗೆ ಕುತ್ತು ಬರಬಾರದು ಎಂದು ರಾಜೀನಾಮೆ ನೀಡುತ್ತಿದ್ದಾರೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments