Select Your Language

Notifications

webdunia
webdunia
webdunia
webdunia

ವಿದ್ಯಾದಾನದ ಮೂಲಕ ಭವಿಷ್ಯದ ಭಾರತ ನಿರ್ಮಿಣ- ಸಚಿವ ವಿ.ಸೋಮಣ್ಣ

ವಿದ್ಯಾದಾನದ ಮೂಲಕ ಭವಿಷ್ಯದ ಭಾರತ ನಿರ್ಮಿಣ- ಸಚಿವ ವಿ.ಸೋಮಣ್ಣ
bangalore , ಭಾನುವಾರ, 5 ಜೂನ್ 2022 (21:16 IST)
ಪರಿಸರ ದಿನದ ಅಂಗವಾಗಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದಿಂದ ಈ ವರ್ಷದ ಶಿಕ್ಷಣದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
 
ಗೋವಿಂದರಾಜನಗರ ಕ್ಷೇತ್ರದ ಬಿಜಿಎಸ್ ಮೂದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಲ್ ಸಿಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸುಮಾರು 600ಕ್ಕೂ ಆಧಿಕ ವಿದ್ಯಾರ್ಥಿಗಳಿಗೆ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಪ್ರತಿಭಾ ಪುರಸ್ಕಾರ ಏರ್ಪಡಿಸಿರುವುದು ಸಂತಸ ತಂದಿದೆ. 
 
ಗೋವಿಂದರಾಜನಗರದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪಾಲಕರಿಗೆ ಯಾವುದೇ ಹೊರೆಯಾಗದಂತೆ ಕ್ಷೇತ್ರಾದ್ಯಂತ ಶಾಲೆಗಳ ನವೀಕರಣ, ನೂತನ ಶಾಲೆಗಳ ನಿರ್ಮಾಣ ಕಾರ್ಯ ಮಾಡಲಾಗಿದೆ. ಉತ್ತಮ ಶಿಕ್ಷಣ ಸೌಲಭ್ಯವನ್ನು ಒದಗಿಸಿದಾಗ ಮಾತ್ರ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶವನ್ನು ನಿರೀಕ್ಷಿಸಬಹುದು. ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣರಾದ ಪಾಲಕರು ಹಾಗೂ ಶಿಕ್ಷಕರಿಗೆ ನನ್ನ ಧನ್ಯವಾದಗಳು. ವಿದ್ಯಾದಾನದ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸುತ್ತಿರುವ ಶಿಕ್ಷಕ ವಂದಕ್ಕೆ ನಮನ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರ ಉತ್ತಮ ರೀತಿಯಲ್ಲಿ ಬದಲಾವಣೆಯಾಗುತ್ತಿದೆ. ಇದು ಭವ್ಯ ಭಾರತದ ಭವಿಷ್ಯಕ್ಕೆ ಸಾಕಷ್ಟು ಕೊಡುಗೆ ನೀಡಲಿದೆ. ಇನ್ನು, ಶಿಕ್ಷಣ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರಿಂದ ಕಾರ್ಯಕ್ರಮದ ಘನತೆ ಹೆಚ್ಚಿದೆ.
 
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಪಣ ತೊಡಲಾಗಿದ್ದು, ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹಾನಗರಕ್ಕೆ ಸಾಕಷ್ಟು ಕೊಡುಗೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸ್ವಂತ ಸೂರು ಹೊಂದಬೇಕೆಂಬ ಕನಸಿರುವ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ವಸತಿ ಯೋಜನೆಗಳನ್ನು ಘೋಷಿಸಲಾಗಿದೆ. ಒಂದು ಲಕ್ಷ ಬಹುಮಹಡಿ, ನಗರದ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಸೂರ್ಯ ನಗರದಂಥ ಯೋಜನೆಗಳು ಸಾವಿರಾರು ಜನರಿಗೆ ಆಸರೆಯಾಗಿವೆ‌ ಎಂದರು.
 
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, 
ಇಂಥ ವಿಶೇಷ ಕಾರ್ಯಕ್ರಮಗಳ ಆಯೋಜನೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಹುರಿದುಂಬಿಸುತ್ತಿರುವ  ಶ್ರೀ ವಿ.ಸೋಮಣ್ಣ ಪ್ರತಿಷ್ಠಾನಕ್ಕೆ ನಮನಗಳು. ಗೋವಿಂದರಾಜನಗರ ಕ್ಷೇತ್ರದಲ್ಲಿ ನೂತನ ಶಾಲೆಗಳು ಹಾಗೂ ಶಾಲೆಗಳ ನವೀಕರಣ ಮಾಡುವುದರ ಮೂಲಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಬಗ್ಗೆ ಸೋಮಣ್ಣ ಅವರಿಗಿರುವ ಅಪಾರ ಕಾಳಜಿ ಅರ್ಥವಾಗುತ್ತದೆ. ಈ ಮೂಲಕ ಕ್ಷೇತ್ರದ ಮಧ್ಯಮ ವರ್ಗದ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಸೋಮಣ್ಣ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ. 
 
ಮಾಜಿ ಪ್ರಧಾನಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ, ಸರ್ವ ಶಿಕ್ಷಣ ಅಭಿಯಾನದ ಮೂಲಕ ದೇಶ ಕಟ್ಟ ಕಡೆಯ ಮಗುವಿಗೂ ಉತ್ತಮ ಶಿಕ್ಷಣ ಲಭ್ಯವಾಗಬೇಕೆಂಬ ಯೋಜನೆ ದೇಶಾದ್ಯಂತ ಜಾರಿಯಾಯಿತು. ಅಲ್ಲದೇ ವಿದ್ಯಾರ್ಥಿನಿಯರ ಹಿತ ದೃಷ್ಟಿಯಿಂದ ದೇಶದ ಪ್ರತಿ ಶಾಲೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡಲಾಯಿತು. ಹೀಗೆ, ದೇಶದಲ್ಲಿ ಬದಲಾವಣೆ ತರಬೇಕೆಂದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರ ಸಾಕಷ್ಟು ಕೊಡುಗೆಗಳನ್ನು ಕಂಡಿದೆ. 
 
ಗೋವಿಂದರಾಜನಗರ ಕ್ಷೇತ್ರಕ್ಕೆ ಸೋಮಣ್ಣ ಅವರು ಕೋಟ್ಯಂತರ ರೂ.ಅನುದಾನ ತರುವ ಮೂಲಕ ಎಲ್ಲ ರೀತಿಯ ಮೂಲಸೌಕರ್ಯಗಳಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ನಿರ್ಮಿಸಿದ್ದಾರೆ. ತಮ್ಮ ಸ್ವಂತ ದುಡ್ಡಿನಲ್ಲಿ ಇಂಥ ಕಾರ್ಯಕ್ರಮಗಳನ್ನು ಏರ್ಪಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದಾರೆ. ಹೀಗಾಗಿ ಶಿಕ್ಷಣ ಇಲಾಖೆಯ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಪ್ರತಿಷ್ಠಾನದ ಮೂಲಕ ಮತ್ತಷ್ಟು ಉತ್ತಮ ಕಾರ್ಯಗಳು ನಡೆಯಲಿ ಎಂದು ಹಾರೈಸುತ್ತೇನೆ ಎಂದರು.
 
ಕಾರ್ಯಕ್ರಮದಲ್ಲಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಶೈಲಜಾ ಸೋಮಣ್ಣ, ಡಾ.ನವೀನ್ ಸೋಮಣ್ಣ, ಡಾ.ಅರುಣ್ ಸೋಮಣ್ಣ ಹಾಗೂ ಶ್ರೀಮತಿ ದಿವ್ಯ ಅವಿನಾಶ್, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಬಿಬಿಎಂಪಿ ಮಾಜಿ ಸದಸ್ಯರು.

Share this Story:

Follow Webdunia kannada

ಮುಂದಿನ ಸುದ್ದಿ

ಎ.ಪಿ.ಎಂ.ಸಿ ಬಳಿಯ ರಾಗಿ ಖರೀದಿ ಕೇಂದ್ರದಲ್ಲಿ ಮದ್ಯವರ್ತಿಗಳ ಕೈಚಳಕ