2ನೇ ದಿನ ಸಿಇಟಿ ಸುಸೂತ್ರ ಎಂದ ಉನ್ನತ ಶಿಕ್ಷಣ ಸಚಿವರು

Webdunia
ಭಾನುವಾರ, 29 ಆಗಸ್ಟ್ 2021 (19:13 IST)
ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ವೃತ್ತಿಶಿಕ್ಷಣ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಎರಡನೇ ದಿನವೂ ಸುಸೂತ್ರವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
 
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸಲಾಗಿದೆ. ನೊಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,93,588 (95.91%) ಅಭ್ಯರ್ಥಿಗಳು ಭೌತಶಾಸ್ತ್ರ ವಿಷಯಕ್ಕೆ ಮತ್ತು 1,93,522 (95.88%) ಅಭ್ಯರ್ಥಿಗಳು ರಸಾಯನಶಾಸ್ತ್ರ ವಿಷಯಕ್ಕೆ ಹಾಜರಾಗಿದ್ದರು” ಎಂದು ಮಾಹಿತಿ ನೀಡಿದ್ದಾರೆ.
 
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಎಸ್‌ಓಪಿ ಅನುಸಾರ ಎಲ್ಲಾ ಸುರಕ್ಷತೆಯ ಕ್ರಮವನ್ನು ಖಾತರಿಪಡಿಸಿಕೊಂಡು ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ಪಾಸಿಟಿವ್ ಇದ್ದ 12 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು ಹೇಳಿದ್ದಾರೆ.
 
ನಾಳೆ (ಅಗಸ್ಟ್ 30) ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗುವುದು. ಒಟ್ಟು 1,682 ಅಭ್ಯರ್ಥಿಗಳು ಈ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments