Select Your Language

Notifications

webdunia
webdunia
webdunia
webdunia

ಶೋಕಾಚರಣೆ ದಿನ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವರಿಗೆ ವೇಣುಗೋಪಾಲ್ ಯಿಂದ ಪುಲ್ ಕ್ಲಾಸ್

ಶೋಕಾಚರಣೆ ದಿನ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವರಿಗೆ ವೇಣುಗೋಪಾಲ್ ಯಿಂದ ಪುಲ್ ಕ್ಲಾಸ್
ಬೆಂಗಳೂರು , ಬುಧವಾರ, 23 ಜನವರಿ 2019 (21:04 IST)
ಬೆಂಗಳೂರು : ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದರೂ ಕೂಡ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.


ಶೋಕಾಚರಣೆಯ ದಿನ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ತಿಳಿದಿದ್ದು, ಹೀಗಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್  ಸಚಿವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ.


‘ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.


ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಸೂಚಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಮಹಿಳೆ ಹಾಗೂ ಮುಸ್ಲಿಂ ಪುರುಷನ ಮದುವೆಗೆ ಕಾನೂನಿನಲ್ಲಿ ಮಾನ್ಯತೆ ಇಲ್ಲ, ಆದರೆ ಹುಟ್ಟಿದ ಮಕ್ಕಳಿಗೆ ಮಾನ್ಯತೆ ಇದೆ- ಸುಪ್ರೀಂಕೋರ್ಟ್