Publish Date: Mon, 10 Feb 2020 (10:37 IST)
Updated Date: Mon, 10 Feb 2020 (10:38 IST)
ಮೈಸೂರು : ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಮೈಸೂರು ಭಾಗಕ್ಕೆ ಸಚಿವ ಸ್ಥಾನ ವಿಚಾರದ ಬಗ್ಗೆ ಸುದ್ದಿಗಾರರೊಂಧಿಗೆ ಮಾತನಾಡಿದ ಅವರು, ‘ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು. ಮೈಸೂರು ಅಭಿವೃದ್ಧಿಗಾಗಿ ಸಚಿವ ಸ್ಥಾನ ಸಿಗಬೇಕು. ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಮಂತ್ರಿಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.