ಬಿಜೆಪಿ ಸಂಸದರಿಗೆ ದಮ್ ಇದ್ರೆ ಮೆಟ್ರೊ ದರ ಕಡಿಮೆ ಮಾಡಲಿ, ನಾವು ಜವಾಬ್ಧಾರಿ ಅಲ್ಲ: ಪ್ರಿಯಾಂಕ್ ಖರ್ಗೆ

Krishnaveni K
ಸೋಮವಾರ, 10 ಫೆಬ್ರವರಿ 2025 (13:21 IST)
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ದರ ಏರಿಕೆಗೆ ನಾವು ಜವಾಬ್ಧಾರಿ ಅಲ್ಲ, ಧಮ್ ಇದ್ರೆ ಬಿಜೆಪಿ ಸಂಸದರು ಕಡಿಮೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಮೆಟ್ರೊ ದರ ನಿನ್ನೆಯಿಂದ ಏಕಾಏಕಿ 40%-50% ನಿಂದ ಹೆಚ್ಚು ಮಾಡಿದ್ದಾರೆ. ಇದರ ಬಗ್ಗೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಇಂದು ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳ ಮುಂದೆ ವ್ಯಂಗ್ಯ ಮಾಡಿದ್ದಾರೆ.

ಮೆಟ್ರೊ ದರ ಏರಿಕೆ ಮಾಡಿರುವುದಕ್ಕೆ ನಮ್ಮ ಸರ್ಕಾರ ಜವಾಬ್ಧಾರಿ ಅಲ್ಲ. ಮೆಟ್ರೊ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ಮೆಟ್ರೊ ದರ ಏರಿಕೆ ಮಾಡಲ್ಲ ಎಂದಾಗ ಇದೇ ಬಿಜೆಪಿ ಸಂಸದರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅಂದರೆ ಈಗ ದರ ಏರಿಕೆ ಮಾಡಿದಾಗ ನಾವು ಜವಾಬ್ಧಾರಿಯಾ? ಈಗಲೂ ಕೇಂದ್ರ ಸರ್ಕಾರವನ್ನು ಹೋಗಿ ಕೇಳಲಿ.

ನಾವು ಇಲ್ಲಿ ಬಸ್ ದರ ಹೆಚ್ಚಳ ಮಾಡಿದಾಗ ಇದೇ ಬಿಜೆಪಿ ನಾಯಕರು ಗುಲಾಬಿ ಹೂ ಹಿಡಿದುಕೊಂಡು ಬಸ್ ಸ್ಟ್ಯಾಂಡ್ ಗೆ ಹೋಗಿ ಜನರ ಬಳಿ ಕ್ಷಮೆ ಕೇಳಿದರು. ಈಗಲೂ ಬಿಜೆಪಿ ನಾಯಕರು ಮೆಟ್ರೊ ನಿಲ್ದಾಣಕ್ಕೆ ಹೋಗಿ ಮೋದಿ ಪರವಾಗಿ ಕ್ಷಮೆ ಕೇಳಲಿ. ಬೇಕಿದ್ದರೆ ಗುಲಾಬಿ ಹೂ ನಾವೇ ಖರೀದಿಸಿ ಕೊಡುತ್ತೇವೆ ಎಂದು ಸಚಿವರು ಟಾಂಗ್ ಕೊಟ್ಟಿದ್ದಾರೆ.

ಇಲ್ಲಿನ ಬಿಜೆಪಿ ಸಂಸದರಿಗೆ ದಮ್ ಇದ್ದರೆ ಮೆಟ್ರೊ ದರ ಕಡಿಮೆ ಮಾಡಲಿ. ಅದು ಬಿಟ್ಟು ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಗೂಬೆ ಕೂರಿಸೋದು, ಕಡಿಮೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸೋದು ಅಲ್ಲ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments