Publish Date: Tue, 09 Dec 2025 (09:56 IST)
Updated Date: Tue, 09 Dec 2025 (09:59 IST)
ಬೆಂಗಳೂರು: ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕ್ರಮ ಇಲ್ವಾ ಎಂಬ ಪ್ರಶ್ನೆಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು ಗೊತ್ತಾ?
ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ, ತಂದೆಯವರೇ ಐದು ವರ್ಷ ಸಿಎಂ ಆಗಿ ಅಧಿಕಾರವಧಿ ಪೂರ್ಣಗೊಳಿಸಲಿದ್ದಾರೆ. ಡಿಕೆ ಶಿವಕುಮಾರ್ ಹೈಕಮಾಂಡ್ ಬಳಿ ಅವಕಾಶ ಕೇಳಿದ್ದಾರೆ. ಆದರೆ ಹೈಕಮಾಂಡ್ ಒಪ್ಪಿಲ್ಲ ಎಂದು ಹೇಳಿಕೆ ನೀಡಿದ್ದರು.
ಇದು ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಭುಗಿಲೇಳುವಂತೆ ಮಾಡಿದೆ. ಕಾಂಗ್ರೆಸ್ ನೊಳಗೇ ಯತೀಂದ್ರ ಹೇಳಿಕೆಗೆ ಅಸಮಾಧಾನ ಮೂಡಿದೆ. ಯತೀಂದ್ರ ಎರಡನೇ ಬಾರಿಗೆ ಇಂತಹ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ. ಹಾಗಿದ್ದರೂ ಸಿಎಂ ಪುತ್ರ ಎಂಬ ಕಾರಣಕ್ಕೆ ಅವರ ಮೇಲೆ ಕ್ರಮ ಇಲ್ವಾ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟಿಕೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಮಲಿಂಗಾ ರೆಡ್ಡಿ ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳುತ್ತದೆ. ನಾಯಕತ್ವ ವಿಚಾರವನ್ನು ಕೂಡಾ ಹೈಕಮಾಂಡ್ ನಾಯಕರೇ ತೀರ್ಮಾನಿಸುತ್ತಾರೆ. ಯಾರು ಯಾರು ಏನು ಹೇಳಿಕೆ ಕೊಡಬೇಕು ಎಂದು ಅವರವರಿಗೆ ಗೊತ್ತಿರಬೇಕು ಎಂದಿದ್ದಾರೆ.