ಬೆಂಗಳೂರು: ಸೇನೆಗೆ ಮೊದಲೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಇಷ್ಟೆಲ್ಲಾ ದಾಳಿ ಆಗ್ತಾನೇ ಇರ್ಲಿಲ್ಲ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಇಂದು ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿದ ಬಗ್ಗೆ ಮಾಧ್ಯಮಗಳ ಮುಂದೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತೀಯ ಸೈನಿಕರ ಕಾರ್ಯಾಚರಣೆ ಬಗ್ಗೆ, ಕೆಲಸದ ಬಗ್ಗೆ ನಮಗೆಲ್ಲರಿಗೂ ಗೊತ್ತಿದೆ. ಈವತ್ತು ಅಂತಲ್ಲ, ಚೀನಾ ದಾಳಿ ಮಾಡಿದ್ದಾಗ, ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಧಾನ ಮಂತ್ರಿಯಾಗಿದ್ದಾಗ, ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಬಹಳ ಒಳ್ಳೆಯ ಕೆಲಸ ಮಾಡಿ ದೇಶದ ಕೀರ್ತಿ ಹೆಚ್ಚಿಸಿದ್ದಾರೆ.
ಈಗಲೂ ಕೂಡಾ ಸರ್ಜಿಕಲ್ ಸ್ಟ್ರೈಕ್ ಮಾಡಿದ ಸಂದರ್ಭದಲ್ಲಿ ಬಹಳ ಹಿಂದೆನೇ ಸೇನೆಗೆ ಫ್ರೀ ಹ್ಯಾಂಡ್ ಕೊಡಬೇಕಿತ್ತು. ಆ ಸಂದರ್ಭದಲ್ಲೇ ಹೀಗೆ ಮಾಡಿದ್ರೆ ಇಂತಹ ದಾಳಿಗಳು ಆಗ್ತಿರಲಿಲ್ಲ. ಬಹಳ ಹಿಂದೆನೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಪುಲ್ವಾಮದಲ್ಲಿ ಸೈನಿಕರು ಸಾಯ್ತಿರಲಿಲ್ಲ, ಪಹಲ್ಗಾಮ್ ನಲ್ಲಿ ಪ್ರವಾಸಿಗರು ಸಾಯುತ್ತಿರಲಿಲ್ಲ.
ಈಗ ಸರ್ಕಾರ ಸೈನಿಕರಿಗೆ ಬೆಂಬಲ ಕೊಟ್ಟಿದೆ. ನಮ್ಮ ಕಾಂಗ್ರೆಸ್ ಪಕ್ಷವೂ ಸೈನಿಕರು, ಕೇಂದ್ರದ ಜೊತೆಗಿರುತ್ತದೆ ಎಂದು ಹೇಳಿದ್ದೇವೆ. ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಹೇಳಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.