Select Your Language

Notifications

webdunia
webdunia
webdunia
webdunia

ಸಂಕಷ್ಟದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

ಸಂಕಷ್ಟದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್
ಬೆಂಗಳೂರು , ಸೋಮವಾರ, 19 ಜೂನ್ 2017 (16:57 IST)
ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಕ್`ಲೈನ್ ಎಂಟರ್ ಟೈನ್`ಮೆಂಟ್ ಲಿಮಿಟೇಡ್`ಗೆ 7 ಕೋಟಿ 25 ಲಕ್ಷದ 5 ಸಾವಿರ ರೂಪಾಯಿ ಪಾವತಿಸುವಂತೆ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

ಹಣದ ಪಾವತಿಸಲು ವಿಫಲವಾದರೆ 6 ತಿಂಗಳು ಜೈಲು ಶಿಕ್ಷೆಗೆ ಕೋರ್ಟ್ ಆದೇಶಿಸಿದೆ. ಈ ಮಧ್ಯೆ, ಪ್ರಕರಣದ ಕುರಿತಂತೆ ಮೇಲ್ಮನವಿ ಸಲ್ಲಿಸಲು ಸಚಿವ ಸಂತೋಷ್ ಲಾಡ್ ಕಾಲಾವಕಾಶ ಕೋರಿದ್ದು, ಒಂದು ತಿಂಗಳ ಮಟ್ಟಿಗೆ ಶಿಕ್ಷೆಯನ್ನ ಕೋರ್ಟ್ ಅಮಾನತಿನಲ್ಲಿಟ್ಟಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು. ಚೆಕ್ ಬೌನ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನನ್ನ ಮತ್ತಷ್ಟು ಕಠಿಣಗೊಳಿಸುವ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನ ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಬಗ್ಗೆ ನಿಮಗೆಷ್ಟು ಗೊತ್ತು?